Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:15 - ಪರಿಶುದ್ದ ಬೈಬಲ್‌

15 ಹತಳಾದ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ. ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಜೂರ್ ಎಂಬವನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹತಳಾದ ಮಿದ್ಯಾನ್ ಮಹಿಳೆಯ ಹೆಸರು ಕೊಜ್ಜೀ. ಅವಳು ಮಿದ್ಯಾನ್ಯರಲ್ಲಿ ಗೋತ್ರನಾಯಕನಾದ ಚೂರ್ ಎಂಬವನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹತವಾದ ಆ ವಿುದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ವಿುದ್ಯಾನ್ಯರಲ್ಲಿ ಗೋತ್ರಪ್ರಧಾನನಾದ ಚೂರ್ ಎಂಬವನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:15
7 ತಿಳಿವುಗಳ ಹೋಲಿಕೆ  

ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.


ಆದ್ದರಿಂದ ಅಮೋರಿಯರ ಅರಸನಾದ ಸೀಹೋನನ ಆಳ್ವಿಕೆಯಲ್ಲಿದ್ದ ಎಲ್ಲ ಊರುಗಳನ್ನು ಆ ಪ್ರದೇಶವು ಒಳಗೊಂಡಿತ್ತು. ಆ ಅರಸನು ಹೆಷ್ಬೋನ್ ಪಟ್ಟಣದಲ್ಲಿ ಆಳಿದನು. ಆದರೆ ಮೋಶೆಯು ಅವನನ್ನು ಮತ್ತು ಮಿದ್ಯಾನ್ ಜನರ ನಾಯಕರನ್ನು ಸೋಲಿಸಿದ್ದನು. ಎವೀ, ರೆಕೆಮ್, ಚೂರ್, ಹೂರ್ ಮತ್ತು ರೆಬಾ, ಇವರೇ ಆ ನಾಯಕರಾಗಿದ್ದರು. (ಈ ನಾಯಕರೆಲ್ಲ ಸೀಹೋನನ ಜೊತೆ ಸೇರಿ ಯುದ್ಧಮಾಡಿದ್ದರು.) ಈ ನಾಯಕರೆಲ್ಲ ಅದೇ ದೇಶದಲ್ಲಿ ವಾಸವಾಗಿದ್ದರು.


ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”


ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದರು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು,


ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ.


ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು