18 ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”
18 ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.
18 ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.
ಅಬೀಮೆಲೆಕನು ಅವನಿಗೆ, “ನೀನು ನಮಗೆ ಕೆಟ್ಟದ್ದನ್ನು ಮಾಡಿದೆ. ನಮ್ಮಲ್ಲಿರುವ ಯಾವ ಗಂಡಸಾದರೂ ನಿನ್ನ ಹೆಂಡತಿಯೊಡನೆ ಮಲಗಿಕೊಳ್ಳಲು ನೀನೇ ಆಸ್ಪದ ಮಾಡಿಕೊಟ್ಟಿದ್ದೆ. ಅಂಥದ್ದೇನಾದರೂ ನಡೆದಿದ್ದರೆ ಮಹಾ ಅಪರಾಧವಾಗುತ್ತಿತ್ತು” ಎಂದು ಹೇಳಿದನು.
ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.