ಅರಣ್ಯಕಾಂಡ 25:2 - ಪರಿಶುದ್ದ ಬೈಬಲ್2-3 ಮೋವಾಬ್ ಸ್ತ್ರೀಯರು ತಮ್ಮ ಸುಳ್ಳುದೇವರಿಗೆ ಮಾಡಿದ ಔತಣಯಜ್ಞಗಳಿಗೆ ಅವರನ್ನು ಆಮಂತ್ರಿಸಿದರು. ಆದ್ದರಿಂದ ಇಸ್ರೇಲರು ಅವರ ಯಜ್ಞಗಳ ಆಹಾರವನ್ನು ತಿಂದರು ಮತ್ತು ಅವರ ದೇವರನ್ನು ಪೂಜಿಸಿದರು. ಈ ರೀತಿ ಇಸ್ರೇಲರು ಸುಳ್ಳುದೇವರಾದ ಪೆಗೋರ್ ಬಾಳನ ಭಕ್ತರಾದರು. ಹೀಗಾಗಿ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿ |
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.