ಅರಣ್ಯಕಾಂಡ 25:5 - ಪರಿಶುದ್ದ ಬೈಬಲ್5 ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನೂ ಸುಳ್ಳುದೇವರಾದ ಪೆಗೋರದ ಬಾಳನನ್ನು ಆರಾಧಿಸುವಂತೆ ಜನರನ್ನು ಪ್ರೋತ್ಸಾಹಿಸಿದವರನ್ನು ಕಂಡುಹಿಡಿದು ಅವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಂತೆಯೇ ಮೋಶೆ ಇಸ್ರಯೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳ್ ದೇವತೆಗೆ ಪೂಜಿಸುವ ತನ್ನ ತನ್ನ ವಂಶದವರಿಗೆ ಪ್ರಾಣಶಿಕ್ಷೆಯನ್ನು ವಿಧಿಸಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದಕಾರಣ ಮೋಶೆ ಇಸ್ರಾಯೇಲ್ಯರ ನ್ಯಾಯಾಧಿಪತಿಗಳಿಗೆ - ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳನಿಗೆ ಸೇರಿಕೊಂಡ ತನ್ನ ತನ್ನ ವಶದಲ್ಲಿರುವವರಿಗೆ ಪ್ರಾಣ ಶಿಕ್ಷೆಯನ್ನು ನಡಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು. ಅಧ್ಯಾಯವನ್ನು ನೋಡಿ |
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.