Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:11 - ಪರಿಶುದ್ದ ಬೈಬಲ್‌

11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಪಂಗಡದವರೆಲ್ಲರು ಸತ್ತರು. ಆದರೆ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೂ ಕೋರಹನ ಮಕ್ಕಳು ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:11
19 ತಿಳಿವುಗಳ ಹೋಲಿಕೆ  

ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಕಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು.


ಸರ್ವಜನಾಂಗಗಳೇ, ಕೇಳಿರಿ, ಭೂನಿವಾಸಿಗಳೆಲ್ಲರೇ, ಆಲಿಸಿರಿ.


ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು.


ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ!


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ.


ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.


“ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.


ಆ ಜನರೆಲ್ಲಾ ಸಜೀವ ಸಮಾಧಿಯಾದರು. ಅವರ ಆಸ್ತಿಪಾಸ್ತಿಯೆಲ್ಲಾ ಅವರೊಡನೆ ಭೂಸಮಾಧಿಯಾಯಿತು. ಆ ಬಳಿಕ ಭೂಮಿ ಅವರ ಸಮೇತವಾಗಿ ಮುಚ್ಚಿಕೊಂಡಿತು. ಅದೇ ಅವರ ಅಂತ್ಯವಾಯಿತು. ಅವರು ಸಮುದಾಯದಿಂದ ಶಾಶ್ವತವಾಗಿ ಇಲ್ಲವಾದರು!


ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ಆದ್ದರಿಂದ ಜನರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರಗಳನ್ನು ಬಿಟ್ಟು ದೂರಹೋದರು. ದಾತಾನ್ ಮತ್ತು ಅಬೀರಾಮ್ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಪ್ರವೇಶದ್ವಾರದ ಬಳಿ ತಮ್ಮ ಹೆಂಡತಿಯರೊಡನೆ, ಮಕ್ಕಳೊಡನೆ ಮತ್ತು ಕೂಸುಗಳೊಡನೆ ನಿಂತುಕೊಂಡರು.


ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತೊ ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು.


ಸಿಮೆಯೋನ್ ಕುಲದ ಕುಟುಂಬಗಳು: ನೆಮೂವೇಲನ ಕುಟುಂಬದವರಾದ ನೆಮೂವೇಲ್ಯರು; ಯಾಮೀನನ ಕುಟುಂಬದವರಾದ ಯಾಮೀನ್ಯರು; ಯಾಕೀನನ ಕುಟುಂಬದವರಾದ ಯಾಕೀನ್ಯರು;


ರೂಬೇನ್ ಕುಲದ ಎಲೀಯಾಬನ ಮಕ್ಕಳಾದ ದಾತಾನನಿಗೆ ಮತ್ತು ಅಬೀರಾಮನಿಗೆ ಯೆಹೋವನು ಮಾಡಿದ್ದನ್ನು ನೀವೇ ನೋಡಿದ್ದೀರಿ. ನಿಮ್ಮ ಕಣ್ಣಮುಂದೆಯೇ ಭೂಮಿಯು ಬಾಯಿ ತೆರೆದು ಅವರನ್ನು, ಅವರ ಹೆಂಡತಿಮಕ್ಕಳನ್ನು, ಅವರ ಗುಡಾರವನ್ನು, ಸೇವಕರನ್ನು, ಅವರ ಪಶುಗಳನ್ನು ನುಂಗಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ.


ಮೆರಾಯೋತನ ಮಗನು ಅಮರ್ಯ. ಅಮರ್ಯನ ಮಗನು ಅಹೀಟೂಬ.


ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು