Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:30 - ಪರಿಶುದ್ದ ಬೈಬಲ್‌

30 ಗಿಲ್ಯಾದನ ಕುಟುಂಬದವರು: ಈಯೆಜೆರನ ಕುಟುಂಬದವರಾದ ಈಯೆಜೆರ್ಯರು; ಹೇಲೆಕನ ಕುಟುಂಬದವರಾದ ಹೇಲೆಕ್ಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಗಿಲ್ಯಾದನ ವಂಶದವರು ಇವರು : ಈಯೆಜೆರನಿಂದ ಈಯೆಜೆರ್ಯರು, ಹೇಲಿಕನಿಂದ ಹೇಲಿಕ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಗಿಲ್ಯಾದನ ವಂಶದವರು ಯಾರಂದರೆ - ಈಯೆಜೆರನ ವಂಶಸ್ಥರಾದ ಈಯೆಜೆರ್ಯರು. ಹೇಲೆಕನ ವಂಶಸ್ಥರಾದ ಹೇಲೆಕ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಗಿಲ್ಯಾದನ ಪುತ್ರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:30
6 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.


ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯರಾದ ನಿಮ್ಮ ಸುಗ್ಗಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ಗಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ?


ಅಸ್ರೀಯೇಲನ ಕುಟುಂಬದವರಾದ ಅಸ್ರೀಯೇಲ್ಯರು; ಶೆಕೆಮನ ಕುಟುಂಬದವರಾದ ಶೆಕೆಮ್ಯರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು