Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:5 - ಪರಿಶುದ್ದ ಬೈಬಲ್‌

5 ರೂಬೇನ್ ಕುಲದ ಜನರು: (ರೂಬೇನನು ಇಸ್ರೇಲನ ಚೊಚ್ಚಲ ಮಗನು.) ಹನೋಕನ ಕುಟುಂಬದವರಾದ ಹನೋಕ್ಯರು; ಪಲ್ಲೂವಿನ ಕುಟುಂಬದವರಾದ ಪಲ್ಲೂವಿನವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಕೋಬನ ಜೇಷ್ಠ ಪುತ್ರನಾದ ರೂಬೇನನ ವಂಶಸ್ಥರು ಇವರು: ಹನೋಕನಿಂದ ಹನೋಕ್ಯರು, ಪಲ್ಲೂವಿನಿಂದ ಪಲ್ಲೂವಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲನ ಚೊಚ್ಚಲುಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವವಂದರೆ - ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:5
11 ತಿಳಿವುಗಳ ಹೋಲಿಕೆ  

ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.


ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ.


ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ಅವರು ಇಸ್ರೇಲನ ಚೊಚ್ಚಲ ಮಗನಾದ ರೂಬೇನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿ ಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಹೆಸರುಗಳನ್ನು ಪಟ್ಟಿಮಾಡಲಾಯಿತು.


“ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ನೀವು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚು ವಯಸ್ಸಾದ ಗಂಡಸರನ್ನು ಲೆಕ್ಕಿಸಬೇಕು.”


ಹೆಚ್ರೋನನ ಕುಟುಂಬದವರಾದ ಹೆಚ್ರೋನ್ಯರು; ಕರ್ಮೀಯ ಕುಟುಂಬದವರಾದ ಕರ್ಮೀಯರು.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು