Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:58 - ಪರಿಶುದ್ದ ಬೈಬಲ್‌

58 ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಲೇವಿ ಕುಲದವರ ಕುಟುಂಬಗಳು ಯಾವುವೆಂದರೆ - ಲಿಬ್ನೀ, ಹೆಬ್ರೋನ್, ಮಹ್ಲೀಯ, ಮೂಷೀಯ ಮತ್ತು ಕೋರಹಿಯ ಎಂಬ ಕುಟುಂಬಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಲೇವಿ ಕುಲದವರ ಕುಟುಂಬಗಳು - ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಲೇವಿಯರ ಕುಟುಂಬಗಳು ಇವೇ. ಲಿಬ್ನೀಯರ ಕುಟುಂಬ; ಹೆಬ್ರೋನಿಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹೀಯರ ಕುಟುಂಬ. ಕೊಹಾತನು ಅಮ್ರಾಮನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:58
6 ತಿಳಿವುಗಳ ಹೋಲಿಕೆ  

ಕೋರಹ, ದಾತಾನ್, ಅಬೀರಾಮ್ ಮತ್ತು ಓನ್ ಎಂಬವರು ಮೋಶೆಗೆ ವಿರುದ್ಧವಾಗಿ ಎದ್ದರು. (ಕೋರಹನು ಇಚ್ಹಾರನ ಮಗನು, ಇಚ್ಹಾರನು ಕೆಹಾತನ ಮಗನು. ಕೆಹಾತನು ಲೇವಿಯ ಮಗನು. ದಾತಾನ್ ಮತ್ತು ಅಬೀರಾಮ್ ಇವರು ಎಲೀಯಾಬನ ಗಂಡುಮಕ್ಕಳು ಮತ್ತು ಓನನು ಪೆಲೆತನ ಮಗನು. ದಾತಾನ್, ಅಬೀರಾಮ್ ಮತ್ತು ಓನ್ ಇವರು ರೂಬೇನನ ಸಂತತಿಯವರು.)


ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು.


ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಕಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು.


ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.


ಮಹ್ಲೀ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೀಯ ಗೋತ್ರದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು