Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:59 - ಪರಿಶುದ್ದ ಬೈಬಲ್‌

59 ಅಮ್ರಾಮನು ಕೆಹಾತನ ಕುಲಕ್ಕೆ ಸೇರಿದವನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಅವಳು ಲೇವಿ ಕುಟುಂಬದವಳು. ಅವಳು ಈಜಿಪ್ಟಿನಲ್ಲಿ ಹುಟ್ಟಿದಳು. ಅಮ್ರಾಮ್ ಮತ್ತು ಯೋಕೆಬೆದಳಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅವರು ಯಾರೆಂದರೆ ಆರೋನ ಮತ್ತು ಮೋಶೆ. ಅವರಿಗೆ ಒಬ್ಬ ಮಗಳೂ ಇದ್ದಳು. ಅವಳ ಹೆಸರು ಮಿರ್ಯಾಮಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿ ಈಜಿಪ್ಟ್ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದ ಎಂಬವಳು. ಈಕೆಯಲ್ಲಿ ಅಮ್ರಾಮನಿಂದ ಆರೋನ, ಮೋಶೆ ಮತ್ತು ಅಕ್ಕ ಮಿರ್ಯಾಮಳೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿ ಯಾರಂದರೆ ಐಗುಪ್ತದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ ಮೋಶೆಯೂ ಇವರ ಅಕ್ಕನಾದ ವಿುರ್ಯಾಮಳೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಈಜಿಪ್ಟಿನಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:59
7 ತಿಳಿವುಗಳ ಹೋಲಿಕೆ  

ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು.


“ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಂದೆಯ ಹತ್ತಿರದ ಸಂಬಂಧಿ.


ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದ್ದಳು.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.


ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು