Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:9 - ಪರಿಶುದ್ದ ಬೈಬಲ್‌

9 ಎಲೀಯಾಬನ ಗಂಡುಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೆ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ದಂಗೆ ಎದ್ದವರೇ ದಾತಾನ್ ಮತ್ತು ಅಬೀರಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎಲೀಯಾಬನ ಮಕ್ಕಳು ಇವರು - ನೆಮೂವೇಲ್, ದಾತಾನ್ ಮತ್ತು ಅಬೀರಾಮ್, ಕೋರಹನ ಪಂಗಡದವರು ಸರ್ವೇಶ್ವರನಿಗೆ ವಿರುದ್ಧ ವಾದಿಸಿದ ಕಾಲದಲ್ಲಿ ಅವರೊಂದಿಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧ ಪ್ರತಿಭಟಿಸಿದ ಆಲೋಚನಾಕರ್ತರು ದಾತಾನ್ ಮತ್ತು ಅಬೀರಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಲೀಯಾಬನ ಪುತ್ರರು ನೆಮೂಯೇಲ್, ದಾತಾನ್, ಅಬೀರಾಮ್. ಈ ದಾತಾನನೂ, ಅಬೀರಾಮನೂ ಜನರಲ್ಲಿ ಪ್ರಸಿದ್ಧರಾಗಿದ್ದು; ಕೋರಹನ ಗುಂಪಿನಲ್ಲಿದ್ದು; ಯೆಹೋವ ದೇವರಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:9
5 ತಿಳಿವುಗಳ ಹೋಲಿಕೆ  

ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು.


ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ಭೂಮಿಯು ಬಾಯ್ದೆರೆದು ಹೊಟ್ಟೆಕಿಚ್ಚುಪಟ್ಟ ದಾತಾನನನ್ನೂ ಅಬಿರಾಮನ ಪಂಗಡದವರನ್ನೂ ನುಂಗಿಬಿಟ್ಟಿತು.


ಪಲ್ಲೂವಿನ ಮಗನು ಎಲೀಯಾಬ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು