ಅರಣ್ಯಕಾಂಡ 27:17 - ಪರಿಶುದ್ದ ಬೈಬಲ್17 ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದದರಿಂದ ಅವರ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನಾಯಕನಾಗಿ ಅವರ ಮುಂದೆ ಹೊರಡುವದಕ್ಕೂ ಅವರನ್ನು ಹಿಂದಕ್ಕೆ ಕರಕೊಂಡು ಬರುವದಕ್ಕೂ ಒಬ್ಬ ಪುರುಷನನ್ನು ನೇವಿುಸಬೇಕೆಂದು ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು. ಅಧ್ಯಾಯವನ್ನು ನೋಡಿ |
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.