Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:18 - ಪರಿಶುದ್ದ ಬೈಬಲ್‌

18 ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಯೆಹೋವನು - ನೂನನ ಮಗನಾದ ಯೆಹೋಶುವನು ಆತ್ಮವರ ಸಂಪನ್ನನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:18
32 ತಿಳಿವುಗಳ ಹೋಲಿಕೆ  

ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.


ಬಳಿಕ ಮೋಶೆಯು ತನ್ನ ಕೈಯನ್ನು ಅವನ ಮೇಲಿಟ್ಟು ಹೊಸ ನಾಯಕನಿಗೆ ಕೊಡತಕ್ಕ ಆದೇಶಗಳನ್ನು ಕೊಟ್ಟನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.


ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.


ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”


ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.


ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.


ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.


ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.


ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.


ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.


ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)


ಎಫ್ರಾಯೀಮ್ ಕುಲದಿಂದ ನೂನನ ಮಗನಾದ ಹೋಶೇಯ,


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ಆದ್ದರಿಂದ ಮೋಶೆ ಯೆಹೋಶುವನಿಗೆ, “ಕೆಲವು ಪುರುಷರನ್ನು ಆರಿಸಿಕೊಂಡು, ನಾಳೆ ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ಬೆಟ್ಟದ ತುದಿಯಲ್ಲಿ ನಿಂತು ಗಮನಿಸುವೆನು, ದೇವರು ನನಗೆ ಕೊಟ್ಟ ಊರುಗೋಲನ್ನು ನಾನು ಹಿಡಿದುಕೊಂಡಿರುವೆನು” ಎಂದು ಹೇಳಿದನು.


“ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.


ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.


“ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು.


ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ನಾವು ಮೋಶೆಯ ಆಜ್ಞೆಗಳನ್ನೆಲ್ಲಾ ಪಾಲಿಸಿದೆವು. ಅದೇ ರೀತಿ ನಿನ್ನ ಆಜ್ಞೆಗಳನ್ನೆಲ್ಲಾ ಪಾಲಿಸುತ್ತೇವೆ. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರಲಿ.


ನೋನನು ಎಲೀಷಾಮನ ಮಗ. ಯೆಹೋಶುವನು ನೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು