Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:21 - ಪರಿಶುದ್ದ ಬೈಬಲ್‌

21 ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 [ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:21
23 ತಿಳಿವುಗಳ ಹೋಲಿಕೆ  

ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ.


ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.


ಒಬ್ಬ ಪ್ರಧಾನ ಯಾಜಕನು ಊರೀಮ್ ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವುದನ್ನೂ ತಿನ್ನಬಾರದೆಂದು ರಾಜ್ಯಪಾಲನು ಆಜ್ಞಾಪಿಸಿದನು.


ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.


ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದನು. ಅವನು ಎಫೋದನ್ನು ತಂದನು.


ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಹಾಕಿದನು.


ಮೋಶೆಯು ಇದರ ವಿಷಯದಲ್ಲಿ ತಾನು ಏನು ಮಾಡಬೇಕೆಂದು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಲಾಗಿ,


“ಇಸ್ರೇಲರ ಇಡೀ ಸಮುದಾಯವು ವಿಧೇಯರಾಗುವಂತೆ ನಿನ್ನ ಅಧಿಕಾರಗಳಲ್ಲಿ ಸ್ವಲ್ಪವನ್ನು ಅವನಿಗೆ ಕೊಡು.


ಮೋಶೆಯು ಯೆಹೋವನಿಗೆ ವಿಧೇಯನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು.


ಸೌಲನು ಯಾಜಕನಾದ ಅಹೀಯನ ಜೊತೆ ಮಾತನಾಡುತ್ತಿದ್ದನು. ಸೌಲನು ಯೆಹೋವನ ಸಲಹೆಗಾಗಿ ಕಾಯುತ್ತಿದ್ದನು. ಆದರೆ ಫಿಲಿಷ್ಟಿಯರ ಪಾಳೆಯದಲ್ಲಿ ಗದ್ದಲವೂ ಗಲಿಬಿಲಿಯೂ ಹೆಚ್ಚತೊಡಗಿದವು. ಸೌಲನು ತಾಳ್ಮೆಯಿಲ್ಲದಂತಾದನು. ಕೊನೆಯದಾಗಿ ಸೌಲನು ಯಾಜಕನಾದ ಅಹೀಯನಿಗೆ, “ಅಷ್ಟೇ ಸಾಕು, ಕೈಗಳನ್ನು ಕೆಳಗಿಳಿಸಿ ಪ್ರಾರ್ಥನೆಯನ್ನು ನಿಲ್ಲಿಸು” ಎಂದು ಹೇಳಿದನು.


ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಈ ಐದುಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಮಹಾಯಾಜಕನಾದ ಎಲ್ಲಾಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.


ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು