Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:23 - ಪರಿಶುದ್ದ ಬೈಬಲ್‌

23 ಬಳಿಕ ಮೋಶೆಯು ತನ್ನ ಕೈಯನ್ನು ಅವನ ಮೇಲಿಟ್ಟು ಹೊಸ ನಾಯಕನಿಗೆ ಕೊಡತಕ್ಕ ಆದೇಶಗಳನ್ನು ಕೊಟ್ಟನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಮೇಲೆ ಹಸ್ತನಿಕ್ಷೇಪ ಮಾಡಿ ಅವನಿಗೆ ಅಧಿಕಾರವನ್ನು ವಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಮೇಲೆ ಕೈಯಿಟ್ಟು ಅಧಿಕಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:23
9 ತಿಳಿವುಗಳ ಹೋಲಿಕೆ  

ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.


ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ಅವನನ್ನು ನಿಲ್ಲಿಸು. ಅವರ ಎದುರಿನಲ್ಲಿಯೇ ಅವನಿಗೆ ಆದೇಶಗಳನ್ನು ಕೊಡು.


ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.


ಮೋಶೆಯು ಯೆಹೋವನಿಗೆ ವಿಧೇಯನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”


ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.


“ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು