4 ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರನ್ನು ಅವನ ಕುಲದವರ ಮಧ್ಯದಿಂದ ತೆಗೆಯುವುದು ನ್ಯಾಯವೋ? ನಮ್ಮ ತಂದೆಯ ಸಂಬಂಧಿಕರೊಡನೆ ನಮಗೂ ಸ್ವಾಸ್ತ್ಯವನ್ನು ಕೊಡು” ಎಂದು ಹೇಳಿದರು.
4 ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.
ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.
ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.
ಈ ಐದು ಹೆಣ್ಣುಮಕ್ಕಳು, “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದವರಲ್ಲಿ ಸೇರಿದವನಲ್ಲ. ನಮ್ಮ ತಂದೆಯು ತನ್ನ ಪಾಪದ ಫಲವಾಗಿ ಸತ್ತನು. ಅವನಿಗೆ ಗಂಡುಮಕ್ಕಳಿರಲಿಲ್ಲ.