ಅರಣ್ಯಕಾಂಡ 27:5 - ಪರಿಶುದ್ದ ಬೈಬಲ್5 ಮೋಶೆಯು ಇದರ ವಿಷಯದಲ್ಲಿ ತಾನು ಏನು ಮಾಡಬೇಕೆಂದು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಲಾಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೋಶೆಯು ಅವರ ಪ್ರಾರ್ಥನೆಯನ್ನು ಯೆಹೋವನ ಬಳಿಯಲ್ಲಿ ವಿಚಾರಿಸಲಾಗಿ ಆತನು ಅವನಿಗೆ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.