ಅರಣ್ಯಕಾಂಡ 27:7 - ಪರಿಶುದ್ದ ಬೈಬಲ್7 “ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ತ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರ ತಂದೆಯ ಸ್ವಂತದವರಲ್ಲಿ ಅವರಿಗೂ ಸೊತ್ತನ್ನು ಕೊಡು. ತಂದೆಯ ಸೊತ್ತು ಅವರಿಗೆ ಸೇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಚಲ್ಪಹಾದನ ಪುತ್ರಿಯರು ಹೇಳಿದ್ದು ಸರಿ, ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಿಶ್ಚಯವಾಗಿ ಕೊಡಬೇಕು, ಅವರ ತಂದೆಯ ಸೊತ್ತನ್ನು ಅವರಿಗೆ ಸೇರಿಸಬೇಕು. ಅಧ್ಯಾಯವನ್ನು ನೋಡಿ |
ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.