ಅರಣ್ಯಕಾಂಡ 28:15 - ಪರಿಶುದ್ದ ಬೈಬಲ್15 ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಯೆಹೋವನಿಗೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಮಾವಾಸ್ಯೆಯಲ್ಲಿ ದಹನಬಲಿಯನ್ನೂ ಅರ್ಪಿಸುವುದಲ್ಲದೆ ಪಾಪಪರಿಹಾರಕಬಲಿಗಾಗಿ ಒಂದು ಹೋತವನ್ನು ಸರ್ವೇಶ್ವರನಿಗೆ ಹೆಚ್ಚಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಯೆಹೋವನಿಗೆ ಸಮರ್ಪಿಸಬೇಕು. ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯವನ್ನೂ ಸಮರ್ಪಿಸುವದಲ್ಲದೆ [ಅಮಾವಾಸ್ಯೆಯಲ್ಲಿ] ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.