Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:16 - ಪರಿಶುದ್ದ ಬೈಬಲ್‌

16 “ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನಿಗೆ ಪಸ್ಕಹಬ್ಬದ ಯಜ್ಞವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಂದು ಸರ್ವೇಶ್ವರಸ್ವಾಮಿ ನೇಮಿಸಿದ ಪಾಸ್ಕಹಬ್ಬವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇವಿುಸಿದ ಪಸ್ಕಹಬ್ಬವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:16
15 ತಿಳಿವುಗಳ ಹೋಲಿಕೆ  

ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಂದು ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವು ನಿನಗಾಗಿ ಪಸ್ಕಹಬ್ಬದ ಊಟವನ್ನು ಎಲ್ಲಿ ಸಿದ್ಧಪಡಿಸಬೇಕು?” ಎಂದು ಕೇಳಿದರು.


“ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.


ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ,


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.


“ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ ಮಾಸದಲ್ಲಿ ಇದನ್ನು ಮಾಡಿರಿ. ಯಾಕೆಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು