ಅರಣ್ಯಕಾಂಡ 28:17 - ಪರಿಶುದ್ದ ಬೈಬಲ್17 ಹುಳಿಯಿಲ್ಲದ ರೊಟ್ಟಿಯ ಹಬ್ಬವು ಅದೇ ತಿಂಗಳಿನ ಹದಿನೈದನೆಯ ದಿನದಿಂದ ಪ್ರಾರಂಭವಾಗುವುದು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಯನ್ನೇ ಊಟಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಆರಂಭವಾಗಬೇಕು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿ |
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.