ಅರಣ್ಯಕಾಂಡ 28:24 - ಪರಿಶುದ್ದ ಬೈಬಲ್24 “ಈ ಎಲ್ಲ ಅರ್ಪಣೆಗಳನ್ನು ಆ ಏಳು ದಿನಗಳಲ್ಲಿ ಪ್ರತಿಯೊಂದು ದಿನವೂ ಆಹಾರವಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ಅರ್ಪಿಸಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಇವುಗಳನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಏಳು ದಿನಗಳಲ್ಲೂ ದೈನಿಕ ದಹನಬಲಿಯನ್ನು ಮತ್ತು ಅದಕ್ಕೆ ಸೇರಿದ ಪಾನಾರ್ಪಣೆಯನ್ನು ಒಪ್ಪಿಸಬೇಕಲ್ಲದೆ ಮೇಲೆ ಹೇಳಿದ ಕ್ರಮದ ಮೇರೆಗೆ ಪ್ರತಿದಿನವೂ ದಹನಬಲಿ ರೂಪವಾಗಿ ಸರ್ವೇಶ್ವರನಿಗೆ ಅನ್ನಾರ್ಪಣೆ ಮಾಡಿ ಅವರಿಗೆ ಸುಗಂಧ ಸುವಾಸನೆಯನ್ನು ಉಂಟುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಏಳು ದಿನಗಳಲ್ಲಿಯೂ ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯನೈವೇದ್ಯವನ್ನೂ ಸಮರ್ಪಿಸುವದಲ್ಲದೆ ಮೇಲೆ ಕಂಡ ಕ್ರಮದ ಮೇರೆಗೆ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |