Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:25 - ಪರಿಶುದ್ದ ಬೈಬಲ್‌

25 “ಇದಲ್ಲದೆ ಏಳನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಪ್ರಯಾಸದ ಕೆಲಸವನ್ನು ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಏಳನೆಯ ದಿನದಲ್ಲೂ ಸಭೆ ಕೂಡಬೇಕು. ಆ ದಿನದಂದು ಯಾವ ದುಡಿಮೆಯನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಏಳನೆಯ ದಿನದಲ್ಲೂ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:25
14 ತಿಳಿವುಗಳ ಹೋಲಿಕೆ  

ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.”


ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನು ಮಾಡಬಾರದು.


“ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು.


ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.


“ಎಂಟನೆಯ ದಿನದಲ್ಲಿ ಮುಕ್ತಾಯ ಸಭಾಕೂಟವಿರುವುದು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.


“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.


“ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ.


“ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.


ನೀವು ಯಾವ ಕೆಲಸವನ್ನೂ ಮಾಡಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯನ್ನು ಸಲ್ಲಿಸುವಿರಿ.”


ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.


ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು