Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:28 - ಪರಿಶುದ್ದ ಬೈಬಲ್‌

28 ಇವುಗಳೊಂದಿಗೆ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಪ್ರತಿಯೊಂದು ಹೋರಿಗೆ ಒಂಭತ್ತು ಸೇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹಾಗು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಅಂದರೆ, ಪ್ರತಿಯೊಂದು ಹೋರಿಗೆ ಒಂಬತ್ತು ಸೇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಹಿಟ್ಟನ್ನು ಅಂದರೆ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ ಟಗರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:28
8 ತಿಳಿವುಗಳ ಹೋಲಿಕೆ  

“ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಆ ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನು ಯೆಹೋವನಿಗೆ ಸುಗಂಧ ವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು.


ಟಗರಿಗೆ ಆರು ಸೇರು ಮತ್ತು ಪ್ರತಿಯೊಂದು ಕುರಿಗೆ ಮೂರು ಸೇರು ಈ ಮೇರೆಗೆ ಸಮರ್ಪಿಸಬೇಕು.


ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.


ಹಿಜ್ಕೀಯನು ತನ್ನ ಪಶುಗಳಲ್ಲಿ ಕೆಲವನ್ನು ಸರ್ವಾಂಗಹೋಮಕ್ಕಾಗಿ ಕೊಟ್ಟನು. ಇವುಗಳನ್ನು ಪ್ರತಿನಿತ್ಯದ ಬೆಳಿಗ್ಗೆ ಮತ್ತು ಸಂಜೆ ಸಮರ್ಪಿಸುವ ಸರ್ವಾಂಗಹೋಮಗಳಿಗಾಗಿ ಉಪಯೋಗಿಸಿಕೊಳ್ಳಲಾಯಿತು; ಅಲ್ಲದೆ ಸಬ್ಬತ್ ದಿನದಂದೂ ಅಮವಾಸ್ಯೆ ದಿನದಂದೂ ಅವುಗಳನ್ನು ಅರ್ಪಿಸಿದರು. ಇವೆಲ್ಲಾ ದೇವರ ಕಟ್ಟಳೆಗಳಿಗನುಸಾರವಾಗಿದ್ದವು.


ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.


ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪಹಾಕುವದನ್ನು ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಬಲಿ ಅರ್ಪಿಸುವದನ್ನು ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು.


ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು