ಅರಣ್ಯಕಾಂಡ 28:3 - ಪರಿಶುದ್ದ ಬೈಬಲ್3 ಅವರಿಗೆ ಹೀಗೆ ಹೇಳು: ನೀವು ಯೆಹೋವನಿಗೆ ಕೊಡಬೇಕಾಗಿರುವ ತ್ಯಾಗಮಯವಾದ ಕಾಣಿಕೆಗಳು ಇವುಗಳೇ: ದಿನನಿತ್ಯದ ಸರ್ವಾಂಗಹೋಮಕ್ಕಾಗಿ ಒಂದು ವರ್ಷ ವಯಸ್ಸಿನ ಎರಡು ಗಂಡುಕುರಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ವಿಷಯದಲ್ಲಿ ನೀನು ಅವರಿಗೆ ಹೀಗೆಂದು ಅಪ್ಪಣೆಮಾಡು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದರ ವಿಷಯದಲ್ಲಿ ನೀನು ಅಪ್ಪಣೆ ಮಾಡಬೇಕಾದದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.