ಅರಣ್ಯಕಾಂಡ 28:6 - ಪರಿಶುದ್ದ ಬೈಬಲ್6 (ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯವಾದ ಕಾಣಿಕೆಯಾಗಿಯೂ ಸುಗಂಧ ವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಪ್ರತಿನಿತ್ಯವು ಸರ್ವೇಶ್ವರನಿಗೆ ಸುಗಂಧಕರವಾದ ಈ ದಹನಬಲಿಯನ್ನು ಮಾಡಬೇಕೆಂದು ಸೀನಾಯಿ ಬೆಟ್ಟದಲ್ಲೇ ನೇಮಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಅಧ್ಯಾಯವನ್ನು ನೋಡಿ |
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.