Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:7 - ಪರಿಶುದ್ದ ಬೈಬಲ್‌

7 ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ಪವಿತ್ರಸ್ಥಾನದಲ್ಲಿ ಪೀಠದ ಮೇಲೆ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:7
17 ತಿಳಿವುಗಳ ಹೋಲಿಕೆ  

“ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.


ಯಾಜಕರೇ, ಯೆಹೋವನ ಸೇವಕರೇ, ಗೋಳಾಡಿರಿ. ಯಾಕೆಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ ಮತ್ತು ಧಾನ್ಯಾರ್ಪಣೆ ಇರದು.


ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.


ಈ ಪಶುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆಗಳಲ್ಲದೆ ಈ ಯಜ್ಞಗಳನ್ನು ಮತ್ತು ಅವುಗಳೊಡನೆ ಪಾನದ್ರವ್ಯಾರ್ಪಣೆಗಳನ್ನು ಅರ್ಪಿಸಬೇಕು. ನೀವು ಸಮರ್ಪಿಸುವ ಪಶುಗಳಲ್ಲಿಯೂ ಅಥವಾ ಪಾನದ್ರವ್ಯಸಮರ್ಪಣೆಗಳಲ್ಲಿಯೂ ಯಾವ ದೋಷವೂ ಇರಬಾರದು.


ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.


ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ.


ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.


ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.


ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.


ಈ ಧೂಪವೇದಿಕೆಯನ್ನು ಬೇರೆ ವಿಧದ ಧೂಪಸಮರ್ಪಣೆಗಾಗಲಿ ಸರ್ವಾಂಗಹೋಮವನ್ನು ಅರ್ಪಿಸುವುದಕ್ಕಾಗಲಿ ಯಾವುದೇ ಧಾನ್ಯಸಮರ್ಪಣೆಗಾಗಲಿ ಪಾನದ್ರವ್ಯಸಮರ್ಪಣೆಗಾಗಲಿ ಉಪಯೋಗಿಸಬಾರದು.


ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು.


(ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯವಾದ ಕಾಣಿಕೆಯಾಗಿಯೂ ಸುಗಂಧ ವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.)


ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು