Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:8 - ಪರಿಶುದ್ದ ಬೈಬಲ್‌

8 ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:8
6 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.


“ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.


ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು