Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:9 - ಪರಿಶುದ್ದ ಬೈಬಲ್‌

9-10 “ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮವು, ಅದಕ್ಕೆ ಸೇರಿದ ಪಾನದ್ರವ್ಯವು ಇವುಗಳನ್ನಲ್ಲದೆ ನೀವು ಸಬ್ಬತ್‍ದಿನದಲ್ಲಿ ಹೆಚ್ಚಾಗಿ ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಗೋದಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:9
12 ತಿಳಿವುಗಳ ಹೋಲಿಕೆ  

ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಅವರ ವಿಶ್ರಾಂತಿ ದಿವಸಗಳ ಬಗ್ಗೆ ತಿಳಿಸಿದೆನು. ಆ ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಬಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನ್ನು ನನಗೆ ವಿಶೇಷವಾದವರನ್ನಾಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು.


ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು.


ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.


ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


“ಸಬ್ಬತ್ ದಿವಸದಲ್ಲಿ ರಾಜನು ಯೆಹೋವನಿಗೆ ಸರ್ವಾಂಗಹೋಮವನ್ನು ಸಮರ್ಪಿಸುವನು. ಅವನು ಅದಕ್ಕಾಗಿ ನಿಷ್ಕಳಂಕವಾದ ಆರು ಕುರಿಗಳನ್ನೂ ನಿಷ್ಕಳಂಕವಾದ ಒಂದು ಟಗರನ್ನೂ ಕೊಡಬೇಕು.


ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.


ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು