ಅರಣ್ಯಕಾಂಡ 29:11 - ಪರಿಶುದ್ದ ಬೈಬಲ್11 ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ಪಾಪ ಪರಿಹಾರಕ ಬಲಿ, ದೈನಿಕ ದಹನಬಲಿ ಇದರ ಧಾನ್ಯ-ಪಾನ ದ್ರವ್ಯ ನೈವೇದ್ಯ ಇವುಗಳ ಸಮೇತ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕಯಜ್ಞ, ನಿತ್ಯಸರ್ವಾಂಗಹೋಮ, ಇದರ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳು ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪಾಪ ಪರಿಹಾರಕ ಬಲಿಗಾಗಿ ಒಂದು ಹೋತನ್ನು ಅರ್ಪಿಸುವದರ ಜೊತೆಗೆ ಪ್ರಾಯಶ್ಚಿತ್ತದ ಪಾಪ ಪರಿಹಾರಕ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.