ಅರಣ್ಯಕಾಂಡ 29:12 - ಪರಿಶುದ್ದ ಬೈಬಲ್12 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |
ಅವರು ಅಭ್ಯಾಸಿಸಿದಾಗ ಧರ್ಮಶಾಸ್ತ್ರದಲ್ಲಿ ಈ ಆಜ್ಞೆಗಳನ್ನು ಕಂಡುಕೊಂಡರು: ಏಳನೆಯ ತಿಂಗಳಲ್ಲಿ ಯೆಹೋವನ ಆಜ್ಞೆಗನುಸಾರವಾಗಿ ವಿಶೇಷ ಹಬ್ಬವನ್ನು ಆಚರಿಸಲು ಜೆರುಸಲೇಮಿನಲ್ಲಿ ಸೇರಿಬಂದು ತಾತ್ಕಾಲಿಕವಾದ ಬಿಡಾರಗಳಲ್ಲಿ ವಾಸಿಸಬೇಕು. ಅವರು ತಮ್ಮ ಊರುಗಳ ಮತ್ತು ಜೆರುಸಲೇಮಿನ, “ಬೆಟ್ಟಪ್ರದೇಶಗಳಿಗೆ ಹೋಗಿ ಆಲೀವ್, ಖರ್ಜೂರ, ಕಾಡು ಆಲೀವ್, ಸುಗಂಧ ಮುಂತಾದ ಮರಗಳ ರೆಂಬೆಗಳನ್ನು ತೆಗೆದುಕೊಂಡು ಬಂದು ಅವುಗಳಿಂದ ಆ ಬಿಡಾರಗಳನ್ನು ಮಾಡಬೇಕು” ಎಂಬುದಾಗಿ ಯೆಹೋವನು ಮೋಶೆಗೆ ಕೊಟ್ಟಿದ್ದ ಆಜ್ಞೆಗಳೇ ಅವು.
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.