ಅರಣ್ಯಕಾಂಡ 29:13 - ಪರಿಶುದ್ದ ಬೈಬಲ್13 ನೀವು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಗೆಕರವಾಗಿದೆ. ಸರ್ವಾಂಗಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳನ್ನೂ ಅರ್ಪಿಸಬೇಕು. ಅವುಗಳ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತ ಆದ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ದಿನದಲ್ಲಿ ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಹದಿಮೂರು ಹೋರಿಗಳನ್ನೂ ಎರಡು ಟಗರುಗಳನ್ನೂ ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಯಾಗಿ ಬಲಿಯನ್ನು ಅರ್ಪಿಸಬೇಕು. ಏನೆಂದರೆ, ದೋಷವಿಲ್ಲದ ಹದಿಮೂರು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, ಅಧ್ಯಾಯವನ್ನು ನೋಡಿ |