Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:35 - ಪರಿಶುದ್ದ ಬೈಬಲ್‌

35 “ಎಂಟನೆಯ ದಿನದಲ್ಲಿ ಮುಕ್ತಾಯ ಸಭಾಕೂಟವಿರುವುದು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆಕೂಡಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:35
8 ತಿಳಿವುಗಳ ಹೋಲಿಕೆ  

ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.


ನೀವು ಈ ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.


ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.


“ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ.


“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು