Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:6 - ಪರಿಶುದ್ದ ಬೈಬಲ್‌

6 ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:6
14 ತಿಳಿವುಗಳ ಹೋಲಿಕೆ  

ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕವಾಗಿರುವ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.


ಅಲ್ಲದೆ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.


ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.


“ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”


“ಆರೋನನಿಗೂ ಅವನ ಪುತ್ರರಿಗೂ ಈ ಅಪ್ಪಣೆಯನ್ನು ಕೊಡು: ಸರ್ವಾಂಗಹೋಮದ ನಿಯಮ ಇದಾಗಿದೆ. ಸರ್ವಾಂಗಹೋಮವು ವೇದಿಕೆಯ ಒಲೆಯಲ್ಲಿ ರಾತ್ರಿಯೆಲ್ಲಾ ಮರುದಿನ ಮುಂಜಾನೆಯವರೆಗೆ ಉರಿಯುತ್ತಿರಬೇಕು. ವೇದಿಕೆಯಲ್ಲಿ ಬೆಂಕಿಯು ಉರಿಯುತ್ತಿರಬೇಕು.


ಆ ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನು ಯೆಹೋವನಿಗೆ ಸುಗಂಧ ವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು.


ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಅರ್ಪಿಸಬೇಕು.


ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋಧಿಯ ಹಿಟ್ಟನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು