ಅರಣ್ಯಕಾಂಡ 29:7 - ಪರಿಶುದ್ದ ಬೈಬಲ್7 “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ‘ಉಪವಾಸ ಆಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನ ನೀವು ಯಾವ ದುಡಿಮೆಯನ್ನು ಮಾಡದೆ ದೇವಾರಾಧನೆಗಾಗಿ ಸಭೆ ಕೂಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಉಪವಾಸಾಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮಾಡದೆ ದೇವಾರಾಧನೆಗಾಗಿ ಸಭೆಕೂಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿ |
ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”