ಅರಣ್ಯಕಾಂಡ 3:10 - ಪರಿಶುದ್ದ ಬೈಬಲ್10 “ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಆರೋನನನ್ನು ಹಾಗೂ ಅವನ ಮಕ್ಕಳನ್ನು ನೇಮಿಸು. ಬೇರೆ ಯಾರಾದರು ಆ ವೃತ್ತಿಗೆ ಕೈ ಹಾಕಿದರೆ ಅಂಥವನಿಗೆ ಮರಣ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.” ಅಧ್ಯಾಯವನ್ನು ನೋಡಿ |
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”