ಅರಣ್ಯಕಾಂಡ 3:13 - ಪರಿಶುದ್ದ ಬೈಬಲ್13 ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ವಾಸ್ತವವಾಗಿ ಇಸ್ರಯೇಲರ ಜೇಷ್ಠರೆಲ್ಲರು ನನ್ನ ಸೊತ್ತು, ಈಜಿಪ್ಟ್ ದೇಶದಲ್ಲಿ ಜೇಷ್ಠವಾದುದೆಲ್ಲವನ್ನು ನಾನು ಸಂಹಾರಮಾಡಿದಾಗ ಇಸ್ರಯೇಲರಲ್ಲಿಯ ಜೇಷ್ಠ ಮನುಷ್ಯರನ್ನೂ ಪಶುಪ್ರಾಣಿಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆ. ಆದರೆ ಈಗ ಅಂಥವರಿಗೆ ಬದಲಾಗಿ ಲೇವಿಯರನ್ನು ಆರಿಸಿಕೊಂಡಿದ್ದೇನೆ, ಅವರು ಸರ್ವೇಶ್ವರನಾದ ನನ್ನವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರ ಚೊಚ್ಚಲಾದವರೆಲ್ಲರು ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ ಪಶುಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ; ಅವರು ನನ್ನವರೇ; ನಾನು ಯೆಹೋವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.” ಅಧ್ಯಾಯವನ್ನು ನೋಡಿ |
ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ.