ಅರಣ್ಯಕಾಂಡ 3:2 - ಪರಿಶುದ್ದ ಬೈಬಲ್2 ಆರೋನನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ನಾದಾಬನು ಚೊಚ್ಚಲ ಮಗ. ಅನಂತರ ಹುಟ್ಟಿದವರು ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆರೋನನಿಗಿದ್ದ ಮಕ್ಕಳ ಹೆಸರುಗಳು: ಜೇಷ್ಠಪುತ್ರ ನಾದಾಬ್, ಅಬೀಹು, ಎಲ್ಲಾಜಾರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆರೋನನ ಮಕ್ಕಳು - ಚೊಚ್ಚಲ ಮಗನಾದ ನಾದಾಬ್; ಆಮೇಲೆ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿ |
ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.