Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:20 - ಪರಿಶುದ್ದ ಬೈಬಲ್‌

20 ಮೆರಾರೀಯ ಗೋತ್ರಗಳು: ಮಹ್ಲೀ ಮತ್ತು ಮೂಷೀ. ಅವು ಲೇವಿ ಕುಲದ ಗೋತ್ರಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೆರಾರಿಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೆರಾರೀಯ ಗೋತ್ರದವರು: ಮಹ್ಲೀ ಮತ್ತು ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರವಾಗಿ ಇವರೇ ಲೇವಿ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:20
15 ತಿಳಿವುಗಳ ಹೋಲಿಕೆ  

ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ.


ಮೆರಾರಿಯ ಗಂಡುಮಕ್ಕಳು: ಮಹ್ಲೀ ಮತ್ತು ಮುಷೀ. ಇತರ ಲೇವಿ ಕುಲದ ಕುಟುಂಬಗಳ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ತಂದೆಗಳ ಹೆಸರನ್ನು ಮೊದಲು ತಿಳಿಸಿ, ಅವರ ಗಂಡುಮಕ್ಕಳ ಹೆಸರನ್ನು ನಂತರ ತಿಳಿಸಲಾಗಿದೆ.


ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.


ಮೆರಾರೀಯ ಕುಲದವರಲ್ಲಿ ಇನ್ನೂರಿಪ್ಪತ್ತು ಮಂದಿ; ಇವರ ಮುಖ್ಯಸ್ಥನು ಅಸಾಯನು.


ಮೆರಾರೀಯ ಗಂಡುಮಕ್ಕಳು: ಮೆರಾರೀಯ ಮಗ ಮಹ್ಲೀ; ಮಹ್ಲೀಯ ಮಗನು ಲಿಬ್ನೀ. ಲಬ್ನೀಯ ಮಗ ಶಿಮ್ಮೀ; ಶಿಮ್ಮೀಯನ ಮಗ ಉಜ್ಜ;


ಮಹ್ಲೀ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೀಯ ಗೋತ್ರದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು.


ಕೆಹಾತನ ಗೋತ್ರಗಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಲಿಬ್ನೀ ಮತ್ತು ಶಿಮ್ಮೀಯ ಕುಟುಂಬಗಳು ಗೇರ್ಷೋನನ ಕುಟುಂಬಕ್ಕೆ ಸೇರಿದವುಗಳಾಗಿದ್ದವು.


ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ: ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್; ಮೆರಾರೀಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೆಲೇಲನ ಮಗನಾದ ಅಜರ್ಯ; ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್; ಎಲೀಚಾಫಾನ್ಯನ ಸಂತತಿಯಲ್ಲಿ ಶಿಮ್ರಿ ಮತ್ತು ಯೆಗೀಯೇಲ್; ಆಸಾಫಾನ ಸಂತತಿಯವರಿಂದ ಜೆಕರ್ಯ ಮತ್ತು ಮತ್ತನ್ಯ; ಹೇಮಾನನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮ್ಮೀ; ಯೆದೂತೂನನ ಸಂತತಿಯಲ್ಲಿ ಶೆಮಾಯ ಮತ್ತು ಉಜ್ಜೀಯೇಲ್.


ಲೇವಿಯು ನೂರಮೂವತ್ತೇಳು ವರ್ಷ ಜೀವಿಸಿದನು. ಲೇವಿಯ ಗಂಡುಮಕ್ಕಳ ವಂಶಾವಳಿ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.


ಒಟ್ಟುಗೂಡಿಸಿದ ಕಾಣಿಕೆಯಲ್ಲಿ ಯಾಜಕರೂ ತಮ್ಮ ಪಾಲನ್ನು ತೆಗೆದುಕೊಂಡರು. ಇದನ್ನು ವಂಶಾವಳಿಗನುಸಾರವಾಗಿ ಮಾಡಲಾಯಿತು. ಲೇವಿಯರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕಿಂತ ಹೆಚ್ಚು ವಯಸ್ಸಾದವರೂ ತಮ್ಮ ಪಾಲನ್ನು ಜವಾಬ್ದಾರಿಗಳಿಗನುಸಾರವಾಗಿಯೂ ತಮ್ಮ ಗುಂಪುಗಳಿಗನುಸಾರವಾಗಿಯೂ ಪಡೆದುಕೊಂಡರು.


ಲೇವಿಯ ಸಂತಾನದ ಜನರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ಶಿಮ್ಮಿಯ ಸಂತಾನದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು