ಅರಣ್ಯಕಾಂಡ 3:25 - ಪರಿಶುದ್ದ ಬೈಬಲ್25 ದೇವದರ್ಶನಗುಡಾರದಲ್ಲಿ ಪವಿತ್ರ ಗುಡಾರವನ್ನು, ಹೊರಡೇರೆಯನ್ನು ಮತ್ತು ಅದರ ಮೇಲ್ಹೊದಿಕೆಯನ್ನು ನೋಡಿಕೊಳ್ಳವುದು ಗೇರ್ಷೋನ ವಂಶದವರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಗುಡಾರ, ಅದರ ಮೇಲಿದ್ದ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಗೇರ್ಷೋನನ ವಂಶದವರು ಕಾಪಾಡಬೇಕಾದವುಗಳು ಯಾವವಂದರೆ - ಗುಡಾರವೂ ಅದರ ಮೇಲಣ ಡೇರೆಯ ಬಟ್ಟೆಯೂ ಅದರ ಮೇಲ್ಹೊದಿಕೆಯೂ ದೇವದರ್ಶನದ ಗುಡಾರದ ಬಾಗಲಲ್ಲಿರುವ ಪರದೆಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ, ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.
ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.