Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:27 - ಪರಿಶುದ್ದ ಬೈಬಲ್‌

27 ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರು, ಹೆಬ್ರೋನ್ ಗೋತ್ರದವರು ಹಾಗೂ ಉಜ್ಜೀಯೇಲ್ ಗೋತ್ರದವರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರೂ ಇಚ್ಹಾರ್ ಗೋತ್ರದವರೂ ಹೆಬ್ರೋನ್ ಗೋತ್ರದವರೂ ಉಜ್ಜೀಯೇಲ್ ಗೋತ್ರದವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:27
9 ತಿಳಿವುಗಳ ಹೋಲಿಕೆ  

ಇವರಲ್ಲದೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರ ಕುಲಗಳಿಂದ ಬೇರೆ ನಾಯಕರನ್ನು ಆರಿಸಿಕೊಂಡರು.


ಕೆಹಾತನಿಗೆ ನಾಲ್ಕು ಮಂದಿ ಗಂಡುಮಕ್ಕಳು: ಅಮ್ರಾಮ್, ಇಚ್ಚಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಕೆಹಾತನ ಗೋತ್ರಗಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಅವರು ಅಂಗಳದ ಪರದೆಗಳನ್ನೂ ಅಂಗಳದ ಪ್ರವೇಶದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಈ ಅಂಗಳವು ಪವಿತ್ರ ಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.


ಈ ಕುಲದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 8,300 ಗಂಡಸರು ಮತ್ತು ಗಂಡುಮಕ್ಕಳು ಇದ್ದರು. ಕೆಹಾತ್ಯರಿಗೆ ಪವಿತ್ರಸ್ಥಳದ ವಸ್ತುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು.


ಹಷಬ್ಯನು ಹೆಬ್ರೋನ್ ಸಂತಾನದವನಾಗಿದ್ದನು. ಇವನೂ ಇವನ ಸಂಬಂಧಿಕರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ಯೆಹೋವನ ಸೇವೆಗೂ ಅರಸನ ಕಾರ್ಯಕ್ಕೂ ಅಧಿಕಾರಿಗಳಾಗಿದ್ದರು. ಹಷಬ್ಯನ ವರ್ಗದಲ್ಲಿ ಒಟ್ಟು ಒಂದು ಸಾವಿರದ ಏಳುನೂರು ಮಂದಿ ಸಾಮರ್ಥ್ಯಶಾಲಿಗಳಿದ್ದರು.


“ಕೆಹಾತ್ ಗೋತ್ರದ ಪುರುಷರನ್ನು ಲೆಕ್ಕಿಸು. (ಕೆಹಾತ್ಯರು ಲೇವಿ ವಂಶದವರಾಗಿದ್ದಾರೆ.)


ಉಳಿದೆಲ್ಲ ಕೆಹಾತ್ಯರಿಗೆ ಎಫ್ರಾಯೀಮ್, ದಾನ್ ಮತ್ತು ಮನಸ್ಸೆಯ ಅರ್ಧಕುಲದ ಪ್ರದೇಶಗಳಿಂದ ಹತ್ತು ಪಟ್ಟಣಗಳನ್ನು ಕೊಡಲಾಯಿತು.


ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು