Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:30 - ಪರಿಶುದ್ದ ಬೈಬಲ್‌

30 ಕೆಹಾತ್ಯರ ನಾಯಕ ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಈ ಕೆಹಾತ್ಯರ ಗೋತ್ರಗಳ ಮುಖ್ಯಸ್ಥನು ಉಜ್ಜೀಯೇಲನ ಮಗ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಕೆಹಾತ್ಯರ ಗೋತ್ರಗಳ ಪ್ರಧಾನ ಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:30
7 ತಿಳಿವುಗಳ ಹೋಲಿಕೆ  

ಉಜ್ಜೀಯೇಲನ ಗಂಡುಮಕ್ಕಳು: ಮೀಷಾಯೇಲ್, ಎಲ್ಚಾಫಾನ್ ಮತ್ತು ಸಿತ್ರೀ.


ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.


ಕೆಹಾತ್ಯರ ಗೋತ್ರಗಳವರು ಪವಿತ್ರ ಗುಡಾರದ ದಕ್ಷಿಣ ದಿಕ್ಕಿನ ಉದ್ದಕ್ಕೂ ಪಾಳೆಯ ಹಾಕಿಕೊಂಡರು.


ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.


ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರ ಹೆಸರು ಮೀಶಾಯೇಲ್ ಮತ್ತು ಎಲ್ಸಾಫಾನ್. ಮೋಶೆ ಆ ಪುತ್ರರಿಗೆ, “ಪವಿತ್ರಸ್ಥಳದ ಮುಂದೆ ಬಿದ್ದಿರುವ ನಿಮ್ಮ ಸಹೋದರರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿರಿ” ಎಂದು ಹೇಳಿದನು.


ಅವರು ದೇವದರ್ಶನಗುಡಾರದಲ್ಲಿರುವ ಮಹಾ ಪರಿಶುದ್ಧವಸ್ತುಗಳನ್ನು ನೋಡಿಕೊಳ್ಳಬೇಕು.


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು