ಅರಣ್ಯಕಾಂಡ 3:31 - ಪರಿಶುದ್ದ ಬೈಬಲ್31 ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ತೆರೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವರು ಕಾಪಾಡಬೇಕಾದವುಗಳು ಯಾವವಂದರೆ - ಮಂಜೂಷವೂ ಮೇಜೂ ದೀಪಸ್ತಂಭವೂ ವೇದಿಗಳೂ ದೇವಸ್ಥಾನದ ಸೇವೋಪಕರಣಗಳೂ ಒಳಗಣ ತೆರೆಯೂ ಇವುಗಳೇ. ಇವುಗಳ ಸಕಲವಿಧವಾದ ಪರಿಚರ್ಯವನ್ನು ಅವರು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು. ಅಧ್ಯಾಯವನ್ನು ನೋಡಿ |