Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:38 - ಪರಿಶುದ್ದ ಬೈಬಲ್‌

38 ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆಯೂ ಆರೋನನೂ ಆರೋನನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲ್ಯರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:38
12 ತಿಳಿವುಗಳ ಹೋಲಿಕೆ  

“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”


ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”


“ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನ.


ಮೆರಾರೀ ಗೋತ್ರಗಳ ನಾಯಕನು ಅಬೀಹೈಲನ ಮಗನಾದ ಚೂರೀಯೇಲ್. ಮೆರಾರೀ ಗೋತ್ರಗಳವರು ಪವಿತ್ರ ಗುಡಾರದ ಉತ್ತರ ದಿಕ್ಕಿನಲ್ಲಿ ಪಾಳೆಯ ಮಾಡಿಕೊಂಡರು.


ಕೆಹಾತ್ಯರ ಗೋತ್ರಗಳವರು ಪವಿತ್ರ ಗುಡಾರದ ದಕ್ಷಿಣ ದಿಕ್ಕಿನ ಉದ್ದಕ್ಕೂ ಪಾಳೆಯ ಹಾಕಿಕೊಂಡರು.


ಗೇರ್ಷೋನನ ಕುಲದವರು ಪಶ್ಚಿಮ ದಿಕ್ಕಿನಲ್ಲಿ ದೇವದರ್ಶನಗುಡಾರದ ಹಿಂಭಾಗದಲ್ಲಿ ಪಾಳೆಯ ಮಾಡಿಕೊಂಡರು.


ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.


ಅವರು ಪವಿತ್ರ ಗುಡಾರದ ಸುತ್ತಲಿನ ಅಂಗಳದ ಎಲ್ಲಾ ಕಂಬಗಳನ್ನು ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ಎಲ್ಲಾ ಗದ್ದಿಗೇಕಲ್ಲುಗಳೂ ಗುಡಾರದ ಗೂಟಗಳೂ ಹಗ್ಗಗಳೂ ಸೇರಿವೆ.


ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು