ಅರಣ್ಯಕಾಂಡ 3:40 - ಪರಿಶುದ್ದ ಬೈಬಲ್40 ಯೆಹೋವನು ಮೋಶೆಗೆ, “ನೀನು ಇಸ್ರೇಲರ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರನ್ನು ಲೆಕ್ಕಿಸು. ಅವರ ಹೆಸರುಗಳ ಪಟ್ಟಿಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇದಲ್ಲದೆ ಯೆಹೋವನು ಮೋಶೆಗೆ, “ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸರ್ವೇಶ್ವರ ಮೋಶೆಗೆ, “ನೀನು ಇಸ್ರಯೇಲರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಜೇಷ್ಠಪುತ್ರರನ್ನು ಹೆಸರು ಹಿಡಿದು ಎಣಿಕೆಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಇದಲ್ಲದೆ ಯೆಹೋವನು ಮೋಶೆಗೆ - ನೀನು ಇಸ್ರಾಯೇಲ್ಯರಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರುಹಿಡಿದು ಲೆಕ್ಕಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಲ್ಲಿರುವ ಜೇಷ್ಠಪುತ್ರರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ. ಅಧ್ಯಾಯವನ್ನು ನೋಡಿ |
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.