Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:47 - ಪರಿಶುದ್ದ ಬೈಬಲ್‌

47 ಅಧಿಕೃತ ಅಳತೆಯನ್ನು ಉಪಯೋಗಿಸಿ ಪ್ರತಿಯೊಬ್ಬನಿಗೆ ಅಂದರೆ 273 ಮಂದಿಗೆ ಐದೈದು ಶೆಕೆಲ್ ಬೆಳ್ಳಿಯನ್ನು ಸಂಗ್ರಹಿಸು. (ಅಧಿಕೃತ ಅಳತೆಯಲ್ಲಿ ಒಂದು ಶೆಕೆಲ್ ಅಂದರೆ ಇಪ್ಪತ್ತು ಗೆರಾ.) ಇಸ್ರೇಲರಿಂದ ಈ ಬೆಳ್ಳಿಯನ್ನು ಸಂಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ದೇವರ ಸೇವೆಗೆ ನಿಗದಿಯಾದ ನಾಣ್ಯಗಳ ಮೇರೆಗೆ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:47
10 ತಿಳಿವುಗಳ ಹೋಲಿಕೆ  

ಒಂದು ತಿಂಗಳಿಂದ ಐದು ವರ್ಷದೊಳಗಿನ ಗಂಡು ಮಗುವಿನ ಬೆಲೆ ಐದು ಶೆಕೆಲ್‌ಗಳಾಗಿದೆ. ಹೆಣ್ಣುಮಗುವಿನ ಬೆಲೆ ಮೂರು ಶೆಕೆಲ್‌ಗಳು.


ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.


ಒಂದು ತಿಂಗಳಿನ ಪ್ರಾಯಕ್ಕೆ ಬಂದಿರುವ ಎಲ್ಲರಿಂದಲೂ ನಿಗದಿಪಡಿಸಿದ ಐದು ಶೆಕೆಲ್‌ಗಳನ್ನು ಈಡಾಗಿ ತೆಗೆದುಕೊಳ್ಳಬೇಕು.


“ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಆ ಬೆಲೆಗಳನ್ನು ಕೊಡಬೇಕು. ಒಂದು ಶೆಕೆಲ್‌ನ ಬೆಲೆಯನ್ನು ಇಪ್ಪತ್ತು ಗೇರಾ ತೂಕದ ಪ್ರಕಾರ ನೀವು ಯಾವಾಗಲೂ ನಿರ್ಣಯಿಸಬೇಕು.


ಒಂದು ಶೆಕೆಲ್ ಇಪ್ಪತ್ತು ಗೆರಾ ಇರಬೇಕು. ಒಂದು ಮಿನವು ಅರವತ್ತು ಶೆಕೆಲ್‌ನಷ್ಟು ಇರಬೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್‌ಗಳಿಗೆ ಸಮಾನವಾಗಿರಬೇಕು.


ಮೋಶೆಯು ಇಸ್ರೇಲರಲ್ಲಿ ಚೊಚ್ಚಲಾದ ಗಂಡಸರಿಂದ ಬೆಳ್ಳಿಯನ್ನು ಸಂಗ್ರಹಿಸಿದನು. ಅವನು ಅಧಿಕೃತ ಅಳತೆಯನ್ನು ಉಪಯೋಗಿಸಿ 1,365 ಶೆಕಲ್ ಬೆಳ್ಳಿಯನ್ನು ಸಂಗ್ರಹಿಸಿದನು.


ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)


ಇಪ್ಪತ್ತರಿಂದ ಅರವತ್ತು ವರ್ಷದ ಒಳಗಿರುವ ಮನುಷ್ಯನ ಬೆಲೆ ಐವತ್ತು ಶೆಕೆಲ್ ಬೆಳ್ಳಿಯಾಗಿದೆ. (ಬೆಳ್ಳಿಯನ್ನು ಅಳೆಯಲು ಅಧಿಕೃತ ಅಳತೆಯನ್ನು ಉಪಯೋಗಿಸಬೇಕು.)


ಆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಈ ಹಣವು ಇಸ್ರೇಲರ 273 ಮಂದಿಗೆ ಈಡಾಗಿದೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು