ಅರಣ್ಯಕಾಂಡ 30:13 - ಪರಿಶುದ್ದ ಬೈಬಲ್13 ಹೆಂಡತಿ ಮಾಡಿದ ಹರಕೆಯನ್ನೂ ಆಣೆಯನ್ನೂ ಸ್ಥಿರಪಡಿಸುವುದಕ್ಕಾಗಲಿ ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೆಂಡತಿ ಮಾಡಿದ ಹರಕೆಯನ್ನು ಹಾಗು ಉಪವಾಸವಿರುವೆನೆಂದು ಅವಳು ಮಾಡಿದ ಪ್ರಮಾಣವನ್ನು ದೃಢೀಕರಿಸುವುದಕ್ಕಾಗಲಿ, ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಹಕ್ಕಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೆಂಡತಿ ಮಾಡಿದ ಹರಕೆಯನ್ನೂ ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವದಕ್ಕಾಗಲಿ ರದ್ದು ಮಾಡುವದಕ್ಕಾಗಲಿ ಗಂಡನಿಗೆ ಅಧಿಕಾರವಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು. ಅಧ್ಯಾಯವನ್ನು ನೋಡಿ |
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?
ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.