Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:2 - ಪರಿಶುದ್ದ ಬೈಬಲ್‌

2 “ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾವನಾದರೂ ಯೆಹೋವನಿಗೆ ಹರಕೆಮಾಡಿದರೆ ಇಲ್ಲವೆ ತಾನು ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:2
36 ತಿಳಿವುಗಳ ಹೋಲಿಕೆ  

ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು.


ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ.


ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.


ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.


ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.


ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


“ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!


“ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ!


ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.


ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.


ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೊರಟುಹೋದನು. ಅವರು ಯೆಫ್ತಾಹನನ್ನು ತಮ್ಮ ನಾಯಕನನ್ನಾಗಿಯೂ ಸೇನಾಧಿಪತಿಯನ್ನಾಗಿಯೂ ಮಾಡಿದರು. ಯೆಫ್ತಾಹನು ಮಿಚ್ಛೆ ನಗರದಲ್ಲಿ ಯೆಹೋವನ ಸಮ್ಮುಖದಲ್ಲಿ ತನ್ನ ಎಲ್ಲಾ ಮಾತುಗಳನ್ನು ಮತ್ತೊಮ್ಮೆ ಹೇಳಿದನು.


“ವಿವಾಹಿತ ಸ್ತ್ರೀಯು ಅಂಥಾ ಹರಕೆಯನ್ನಾಗಲಿ ಪ್ರಮಾಣವನ್ನಾಗಲಿ ಮಾಡಿದಾಗ,


ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.


ನಿಮ್ಮ ಸ್ತ್ರೀಯರಿಗಾಗಿಯೂ ಮಕ್ಕಳಿಗಾಗಿಯೂ ಊರುಗಳನ್ನು ಕಟ್ಟಿರಿ ಮತ್ತು ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿರಿ. ಬಳಿಕ ನೀವು ವಾಗ್ದಾನ ಮಾಡಿದಂತೆಯೇ ಮಾಡಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು