ಅರಣ್ಯಕಾಂಡ 30:5 - ಪರಿಶುದ್ದ ಬೈಬಲ್5 ಆದರೆ ತಂದೆಯು ಆ ಸಂಗತಿಯನ್ನು ತಿಳಿದ ದಿನವೇ ಅದನ್ನು ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಇಟ್ಟುಕೊಂಡ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ತಂದೆಯು ಆಕ್ಷೇಪಿಸಿದ್ದರಿಂದ ಯೆಹೋವನು ಅವಳನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಬೇಡವೆಂದು ಹೇಳಿದದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಅವಳ ತಂದೆ ಅದನ್ನು ಕೇಳಿ ಅವಳನ್ನು ತಡೆದರೆ, ಅವಳ ಎಲ್ಲಾ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುತ್ತವೆ. ಅವಳ ತಂದೆ ಅವಳನ್ನು ತಡೆದ ಕಾರಣ ಯೆಹೋವ ದೇವರು ಅವಳನ್ನು ಕ್ಷಮಿಸುವರು. ಅಧ್ಯಾಯವನ್ನು ನೋಡಿ |