ಅರಣ್ಯಕಾಂಡ 30:7 - ಪರಿಶುದ್ದ ಬೈಬಲ್7 ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಗಂಡಸು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು. ಅಧ್ಯಾಯವನ್ನು ನೋಡಿ |
ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸ್ವರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು