Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:12 - ಪರಿಶುದ್ದ ಬೈಬಲ್‌

12 ತಾವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೊ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಆಸ್ತಿಪಾಸ್ತಿಯನ್ನೂ ತೆಗೆದುಕೊಂಡು ಜೆರಿಕೋ ಪಟ್ಟಣದ ಎದುರಿಗಿರುವ ಜೋರ್ಡನ್ ನದಿಯ ತೀರಕ್ಕೆ ಬಂದರು. ಅಲ್ಲಿ ಮೋವಾಬ್ಯರ ಮೈದಾನದ ಪಾಳೆಯದಲ್ಲಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್ ಹಾಗು ಇಸ್ರಯೇಲರ ಸರ್ವಸಮಾಜದವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಸೆರೆಯವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಇಸ್ರಾಯೇಲ್ಯರ ಸರ್ವಸಮೂಹದವರು ಇವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:12
5 ತಿಳಿವುಗಳ ಹೋಲಿಕೆ  

ಬಳಿಕ ಇಸ್ರೇಲರು ಹೊರಟು ಜೆರಿಕೊ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆ ಕಡೆಯಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು.


ಎಲ್ಲಾ ಜನರನ್ನೂ ಪಶುಗಳನ್ನೂ ಹಿಡಿದು,


ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು.


ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.


ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು